Oops! It appears that you have disabled your Javascript. In order for you to see this page as it is meant to appear, we ask that you please re-enable your Javascript!

ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ..!!

Bharatada hecmmeya pv sindhu, badminton vishwa championship geddu nuthana ithihasa barediddare-naadle
Share This:

ಭಾರತದ ಅಗ್ರಮಾನ್ಯ ಷಟ್ಲರ್ ಪಿವಿ ಸಿಂಧು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್​ಷಿಪ್ ಸ್ವರ್ಣ ಪದಕ ಜಯಿಸುವ ಮೂಲಕ ಇತಿಹಾಸ ನಿರ್ವಿುಸಿದ್ದಾರೆ. ಸತತ ಎರಡೂ ಬಾರಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದ ಸಿಂಧು ಮೂರನೇ ಯತ್ನದಲ್ಲಿ ಚಾಂಪಿಯನ್​ಪಟ್ಟ ಅಲಂಕರಿಸಲು ಯಶಸ್ವಿಯಾದರು. ಭಾನುವಾರ ನಡೆದ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ 5ನೇ ಶ್ರೇಯಾಂಕಿತ ಸಿಂಧು 21-7, 21-7 ನೇರ ಗೇಮ್ಳಿಂದ ಜಪಾನ್​ನ ನಜೋಮಿ ಒಕುಹರಾ ಎದುರು ಕೇವಲ 38 ನಿಮಿಷಗಳಲ್ಲಿ ಈ ಸಾಧನೆ ಮೆರೆದರು. Bharatada hecmmeya pv sindhu, badminton vishwa championship geddu nuthana ithihasa barediddare-naadle

Upcoming and Ongoing events

View More Events

Want to Promote your Event, contact Naadle at 7090787344 or Email us at info@naadle.com

ಜಪಾನಿನ ಒಕುಹಾರ ಅವರನ್ನು ಸಿಂಧು 21-7, 21-7 ನೇರ ಸೆಟ್ ಗಳಲ್ಲಿ ಸೋಲಿಸಿ ಇತಿಹಾಸ ನಿರ್ಮಿಸಿದರು. ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಸಿಂಧು ಅವರು 2013 ಮತ್ತು 2014ರಲ್ಲಿ ಕಂಚಿನ ಪದಕ ಗೆದ್ದಿದ್ದರು. 2017 ಹಾಗೂ 2018ರಲ್ಲಿ ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟುಕೊಂಡಿದ್ದರು. ಆದರೆ ಈ ಬಾರಿ ಇಲ್ಲಿ ಭರ್ಜರಿಯಾಗಿ ಗೆಲ್ಲುವ ಮೂಲಕ ಪಿ ವಿ ಸಿಂಧು ಅವರು ಚಿನ್ನದ ನಗೆ ಬೀರಿದ್ದಾರೆ. ‘ಇವತ್ತು ನನ್ನ ತಾಯಿಯ ಜನ್ಮದಿನ. ಹಾಗಾಗಿ ನಾನು ಈ ಸ್ವರ್ಣ ಪದಕವನ್ನು ತಾಯಿಗೆ ಅರ್ಪಿಸುತ್ತಿದ್ದೇನೆ’ – ಎಂದು ಸಿಂಧು ಅವರು ತನ್ನ ಈ ಐತಿಹಾಸಿಕ ಗೆಲುವಿನ ಬಳಿಕ ಹೆಳಿದರು. ಇನ್ನು ತನ್ನ ಈ ಗೆಲುವಿನ ಹಿಂದನ ರೂವಾರಿ ತನ್ನ ತರಬೇತುದಾರ ಪುಲ್ಲೇಲ ಗೋಪಿಚಂದ್ ಅವರ ಶ್ರಮವನ್ನು ನೆನಪಿಸಿಕೊಳ್ಳಲು ಸಿಂಧು ಮರೆಯಲಿಲ್ಲ. ಗೋಪಿಚಂದ್ ಮತ್ತು ತನ್ನ ಬೆಂಬಲ ಸಿಬ್ಬಂದಿಗಳಿಗೂ ಸಹ ಸಿಂಧು ಕೃತಜ್ಞತೆ ಸಲ್ಲಿಸಿದ್ದಾರೆ.

 

Offers

Want to Add your Offers, contact Naadle at 7090787344 or Email us at info@naadle.com