ಇಂದಿನಿಂದ ವಿಜೃಂಭಣೆಯ ಮಂಗಳೂರು ದಸರಾ..!!

indininda vijrabhaneya mangaluru dasaraa-naadle
Share This:

ಕಡಲ ನಗರಿ ಮಂಗಳೂರು ನವರಾತ್ರಿ ಹಬ್ಬಕ್ಕೆ ಸಜ್ಜುಗೊಂಡಿದ್ದು, ದಸರಾ ವೈಭವಕ್ಕೆ ಮೈತಳೆದು ನಿಂತಿದೆ. ಅಕ್ಟೋಬರ್ 10 ರಿಂದ 20 ರವರೆಗೆ ಮಂಗಳೂರು ದಸರಾ ಮಹೋತ್ಸವ ನಡೆಯಲಿದೆ. ಕುದ್ರೋಳಿ ಶ್ರೀ ಗೋಕರ್ಣನಾಥನ ಸನ್ನಿಧಿಯಲ್ಲಿ ಇಂದು ಗಣಪತಿ ಸೇರಿದಂತೆ ನವದುರ್ಗೆಯರ ಸಹಿತ ಶಾರದೆ ದೇವಿಯ ಪ್ರತಿಷ್ಠಾಪನೆ ನಡೆಯಲಿದೆ. ಶ್ರೀ ಕ್ಷೇತ್ರದಲ್ಲಿ ವೈಭವದ ಶಾರದೆಯ ದರ್ಬಾರು ಮಂಟಪ ಅಣಿಯಾಗಿದೆ. ಶ್ರೀ ಗೋಕರ್ಣನಾಥ ಕ್ಷೇತ್ರದ ಅಂಗಳ ಎಲ್ಲಿ ನೋಡಿದರಲ್ಲಿ ಮೈನವಿರೇಳಿಸುವ ಬೆಳಕಿನ ಚಿತ್ತಾರಕ್ಕಾಗಿ ಸಿಂಗಾರಗೊಳ್ಳುತ್ತಿದೆ. ರಾಜ ಬೀದಿಯಲ್ಲಿ ಬಣ್ಣ ಬಣ್ಣದ ವಿದ್ಯುತ್ ದೀಪಗಳ ಅಲಂಕಾರ ಪೂರ್ಣಗೊಂಡಿದೆ. ದಸರಾ ಹಿನ್ನೆಲೆಯಲ್ಲಿ ಮಂಗಳೂರು ನಗರದ ಪ್ರಮುಖ ಕಟ್ಟಡಗಳಿಗೆ ವಿದ್ಯುತ್ ಅಲಂಕಾರ ಗೊಳಿಸಿ ಸಿದ್ಧಗೊಳಿಸಲಾಗಿದೆ .indininda vijrabhaneya mangaluru dasaraa-naadle

Upcoming and Ongoing events

View More Events

Want to Promote your Event, contact Naadle at 7090787344 or Email us at info@naadle.com


ಒಂದೆಡೆ ಕುದ್ರೋಳಿ ದೇವಸ್ಥಾನ ದಸರಾಕ್ಕೆ ಸಜ್ಜಾದರೆ ಇನ್ನೊಂದೆಡೆ ಪ್ರಸಿದ್ಧ ಶ್ರೀ ಮಂಗಳಾದೇವಿ ದೇವಸ್ಥಾನ, ಕಟೀಲು ದುರ್ಗಾಪರಮೇಶ್ವರಿ ದೇವಳ, ಸುಂದರ ಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಾಲಯ , ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನ, ಕೊಡಿಯಾಲ್ ಬೈಲ್ ಭಗವತಿ ದೇವಸ್ಥಾನ , ಉರ್ವ ಮಾರಿಯಮ್ಮ ದೇವಸ್ಥಾನ, ಬೋಳೂರು ಮಾರಿಯಮ್ಮ ದೇವಸ್ಥಾನ, ಕುರುಅಂಬಾ ರಾಜರಾಜೇಶ್ವರಿ ದೇವಸ್ಥಾನ, ನವರಾತ್ರಿ ಹಬ್ಬದ ಸಡಗರಕ್ಕೆ ಶೃಂಗಾರಗೊಂಡಿದೆ.indininda vijrabhaneya mangaluru dasaraa-naadleಅಕ್ಟೊಬರ್ 10 ರಿಂದ 20 ರ ರವರೆಗೆ ನವರಾತ್ರಿ ಸಡಗರ ಕುದ್ರೋಳಿಯಲ್ಲಿ ನಡೆಯಲಿದ್ದು, ಇಂದು ಮಂಗಳೂರು ದಸರಾ ಮಹೋತ್ಸವಕ್ಕೆ ಕರ್ನಾಟಕ ಬ್ಯಾಂಕ್ ನ ವ್ಯವಸ್ಥಾಪಕ ನಿರ್ದೇಶಕ ಮಹಾಬಲೇಶ್ವರ ಎಂ ಎಸ್ ಚಾಲನೆ ನೀಡಲಿದ್ದಾರೆ. ಮಂಗಳೂರು ದಸರಾ ಮಹೋತ್ಸವವನ್ನು ಅಕ್ಟೋಬರ್ 14 ರಂದು ಸಂಜೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ . ಮಂಗಳೂರು ದಸರಾ ಮಹೋತ್ಸವದ ಅಂಗವಾಗಿ ಶ್ರೀ ಕ್ಷೇತ್ರ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯದಲ್ಲಿ ಪ್ರತಿನಿತ್ಯ ಧಾರ್ಮಿಕ , ಸಾಂಸ್ಕೃತಿಕ ಕಾರ್ಯಕ್ರಮ , ಅನ್ನದಾನ ನಡೆಯಲಿದೆ.
naadle If you like this article, click on the button below

Offers

Want to Add your Offers, contact Naadle at 7090787344 or Email us at info@naadle.com