ಇಂದು ಸಂಭ್ರಮದ ತುಳಸಿ ಹಬ್ಬ..!!

indu sambhramada tulasi habba-naadle
Share This:

ಕಾರ್ತಿಕ ಮಾಸದ ಶುಕ್ಲ ಪಕ್ಷದ ದ್ವಾದಶಿಯಂದು ಈ ಪವಿತ್ರದಿನವನ್ನು ತುಳಸಿ ಮದುವೆ ತುಳಸಿ ಹಬ್ಬವಾಗಿ ಆಚರಿಸಲಾಗುತ್ತದೆ. ದೀಪಾವಳಿ ಹಬ್ಬ ಮುಗಿದು ಹಿಂದೂಗಳು ಆಚರಿಸುವ ಹಬ್ಬವೇ ತುಳಸೀಪೂಜೆ ಅಥವಾ ಕಿರು ದೀಪಾವಳಿ. ಚಾಂದ್ರಮಾನ ಕಾರ್ತಿಕಮಾಸದ ಶುಕ್ಲಪಕ್ಷದ 12ನೇ ದಿನ ಅಂದರೆ ದ್ವಾದಶಿಯಂದು ಈ ಹಬ್ಬವನ್ನು ಉತ್ಥಾನ ದ್ವಾದಶಿ ಎಂದು ಆಚರಿಸಲಾಗುತ್ತದೆ.indu sambhramada tulasi habba-naadle

Upcoming and Ongoing events

View More Events

Want to Promote your Event, contact Naadle at 7090787344 or Email us at info@naadle.com


ಹಿಂದೂ ಪುರಾಣದ ಪ್ರಕಾರ ವೃಂದಾ ಎಂಬ ಹೆಸರಿನ ಯುವತಿಯೇ ತುಳಸಿಯಾಗಿ ಗಿಡದ ರೂಪ ಪಡೆದಿರುವುದು. ಈಕೆ ಜಲಂಧರನೆಂಬ ದುಷ್ಟ ರಾಜನನ್ನು ಮದುವೆಯಾಗಿರುತ್ತಾಳೆ. ಅವಳಿಗೆ ಮಹಾವಿಷ್ಣುವಿನ ಮೇಲೆ ವಿಶೇಷ ಭಕ್ತಿ. ಇದು ಜಲಂಧರನಿಗೆ ಇಷ್ಟವಿರುವುದಿಲ್ಲ. ಆತ ದೇವತೆಗಳಿಗೆ ಉಪಟಳ ನೀಡುತ್ತಿರುತ್ತಾನೆ. ಶಿವನು ಏನು ಮಾಡುವುದೆಂದು ವಿಷ್ಣುವಿನ ಮೊರೆ ಹೋಗುತ್ತಾನೆ. ಆಗ ವಿಷ್ಣುವು ಜಲಂಧರನ ರೂಪ ತಾಳಿ ವೃಂದಾಳ ಬಳಿಗೆ ಬಂದು ಮೋಹಿಸಿ ಆಕೆಯ ಪಾವಿತ್ರ್ಯತೆಗೆ ಧಕ್ಕೆ ತರುತ್ತಾನೆ. ಈ ಸಂದರ್ಭದಲ್ಲಿ ಶಿವನು ಜಲಂಧರ ರಾಜನನ್ನು ಸಂಹರಿಸುತ್ತಾನೆ. ಇತ್ತ ತನ್ನ ಚಾರಿತ್ರ್ಯಕ್ಕೆ ಧಕ್ಕೆ ತರುವ ವಿಷ್ಣುವಿಗೆ ವೃಂದಾ ಕಪ್ಪು ಕಲ್ಲಾಗಿ ಹೋಗು ಎಂದು ಶಾಪ ನೀಡುವಳಲ್ಲದೆ ನಿನಗೆ ಪತ್ನಿಯ ವಿರಹವುಂಟಾಗಲಿ ಎಂದು ಆಶಿಸುತ್ತಾಳೆ.  ಇದರಿಂದ ರಾಮಾಯಣದಲ್ಲಿ ವಿಷ್ಣುವಿನ ಅವತಾರ ರಾಮನಿಗೆ ಸೀತೆಯು ಕಾಡಿನಲ್ಲಿ ಕೆಲವು ವರ್ಷಗಳ ಕಾಲ ದೂರವಾಗುತ್ತಾಳೆ. ತನ್ನ ಚಾರಿತ್ರ್ಯಕ್ಕೆ ಧಕ್ಕೆಯುಂಟಾದುದರಿಂದ ವೃಂದಾ ಪತಿಯ ಚಿತೆಗೆ ಹಾರಿ ಸಾವಿಗೀಡಾಗುತ್ತಾಳೆ. ವಿಷ್ಣುವು ಆಕೆಯ ಆತ್ಮವನ್ನು ತುಳಸಿ ಗಿಡವಾಗಿ ಪರಿವರ್ತಿಸಿ ಮುಂದಿನ ಜನ್ಮದಲ್ಲಿ ಸಾಲಿಗ್ರಾಮವಾಗಿ ಪ್ರಭೋದಿನಿ ಏಕಾದಶಿಯ ದಿನ ತುಳಸಿಯನ್ನು ಮದುವೆಯಾಗುತ್ತಾನೆ ಎಂಬ ಕಥೆಯಿದೆ. ಇದರ ಸಂಕೇತವೇ ವಿಷ್ಣು-ತುಳಸಿ ವಿವಾಹ. indu sambhramada tulasi habba-naadleಇನ್ನೊಂದು ಪುರಾಣದ ಪ್ರಕಾರ ದೇವತೆಗಳೂ, ದಾನವರೂ ಕ್ಷೀರಸಾಗರವನ್ನು ಕಡೆದಾಗ ಕೊನೆಯಲ್ಲಿ ಅಮೃತ ಬಂತು. ಅದನ್ನು ಕೈಗೆ ತೆಗೆದುಕೊಂಡ ವಿಷ್ಣುವಿನ ಕಣ್ಣುಗಳಿಂದ ಬಂದ ಆನಂದಬಾಷ್ಪಗಳು ಕಲಶದಲ್ಲಿ ಬಿದ್ದು ಅದರಿಂದ ಒಂದು ಸಣ್ಣ ಗಿಡ ಹುಟ್ಟಿತು. ಅದಕ್ಕೆ ತುಲನೆ ಇಲ್ಲವಾದ್ದರಿಂದ ತುಳಸಿ ಎಂದು ಹೆಸರಿಟ್ಟು ಲಕ್ಷ್ಮಿಯೊಂದಿಗೆ ತುಳಸಿಯನ್ನು ವಿಷ್ಣುವು ಮದುವೆಯಾದನು. ಹಿಂದೂ ಧರ್ಮದಲ್ಲಿ ಮಹಾವಿಷ್ಣುವಿನ ಮಡದಿಯೆಂದೂ ಅವರಿಬ್ಬರಿಗೆ ನಡೆಯುವ ವಿವಾಹವನ್ನು ತುಳಸಿ ವಿವಾಹ ಎಂದು ಕರೆಯುತ್ತಾರೆ.indu sambhramada tulasi habba-naadleತುಳಸಿ ಕಟ್ಟೆಯನ್ನು ರಂಗೋಲಿ, ಹೂವು, ಮಾವಿನ ಎಲೆಗಳಿಂದ ಅಲಂಕರಿಸಿ ವಿಷ್ಣುವಿನ ಅವತಾರ ಕೃಷ್ಣನ ಮೂರ್ತಿಯನ್ನಿರಿಸಿ ಪೂಜಿಸಲಾಗುತ್ತದೆ. ದೀಪಾವಳಿ ಸಮಯದಲ್ಲಿ ಇದ್ದ ಸಂಭ್ರಮವೇ ಈ ತುಳಸಿ ವಿವಾಹ ಸಮಯದಲ್ಲಿಯೂ ಇರುತ್ತದೆ. ತುಳಸಿ ಗಿಡದೊಂದಿಗೆ ಬೆಟ್ಟದ ನೆಲ್ಲಿಕಾಯಿ ಗಿಡವನ್ನು ನೆಟ್ಟು ಪೂಜಿಸುವ ರೂಢಿ ಇದೆ. ದೀಪದಿಂದ ಗಿಡದ ಸುತ್ತ ಅಲಂಕರಿಸಲಾಗುತ್ತದೆ. ತುಳಸಿ ಗಿಡದ ವಿವಾಹವು ಹಿಂದೂ ಪದ್ದತಿಯ ಮದುವೆಯ ಸಂಕೇತವಾಗಿರುವುದರಿಂದ ಹಿಂದೂಗಳ ಮನೆಗಳಲ್ಲಿ, ದೇವಾಲಯಗಳಲ್ಲಿ ಈ ಆಚರಣೆ ನಡೆಸಲಾಗುತ್ತದೆ. ಆ ದಿನ ಪೂಜೆಯಲ್ಲಿ ಪಾಲ್ಗೊಳ್ಳುವವರು ಉಪವಾಸ ಕೈಗೊಳ್ಳುತ್ತಾರೆ. ತುಳಸಿ ಗಿಡದ ಸುತ್ತಲೂ ಮದುವೆ ಮಂಟಪ ನಿರ್ಮಿಸುತ್ತಾರೆ. ಇದಕ್ಕೆ ತುಳಸಿ ಬಂದಾವನವೆಂದು ಹೆಸರು. ವೃಂದಾಳ ಆತ್ಮವು ರಾತ್ರಿಯಿಡೀ ಇದ್ದು ಮರುದಿನ ಬೆಳಿಗ್ಗೆ ಹೊರಟುಹೋಗುತ್ತದೆ ಎಂಬ ನಂಬಿಕೆಯಿದೆ. ಹೆಂಗಳೆಯರು ತುಳಸಿ ಗಿಡವನ್ನು ಮದುವಣಗಿತ್ತಿಯಂತೆ ಸಿಂಗರಿಸುತ್ತಾರೆ. ವಿಷ್ಣುವಿನ ಅಥವಾ ಅವನ ಅವತಾರವಾದ ಕೃಷ್ಣ, ರಾಮನ ಫೋಟೋವನ್ನು ಇಲ್ಲವೇ ಸಾಲಿಗ್ರಾಮ ಕಲ್ಲನ್ನು ತುಳಸಿ ಗಿಡದ ಪಕ್ಕ ಇಟ್ಟು ಇಬ್ಬರನ್ನೂ ಸ್ನಾನ ಮಾಡಿಸಿ ಶುಭ್ರ ಬಟ್ಟೆ ತೊಡಿಸಿ ಹೂವು, ಹಣ್ಣುಗಳಿಂದ ಅಲಂಕರಿಸುತ್ತಾರೆ. indu sambhramada tulasi habba-naadleತುಳಸಿಯ ವಿಶಿಷ್ಟ ಸುವಾ ಸನೆಯು ಕ್ರಿಮಿಕೀಟಗಳನ್ನು ದೂರವಿಡುತ್ತದೆ. ಶೀತ, ನೆಗಡಿ, ಕೆಮ್ಮು ಮೊದಲಾದ ಕಾಯಿಲೆಗಳು ತುಳಸಿಯ ಎಲೆಯಿಂದ ವಾಸಿಯಾಗುತ್ತವೆ. ಇದರಲ್ಲಿ ವಿಷಾಣುಗಳನ್ನು ನಾಶಪಡಿಸುವ ಶಕ್ತಿಯಿದೆ. ಬೃಂದಾವನದಲ್ಲಿ ಉದುರಿರುವ ತುಳಸಿ ಎಲೆಗಳಿಂದ ಮಣ್ಣುಗೂಡಿರುವ ಮೃತ್ತಿಕೆಯನ್ನು ಮೈಗೆ ಹಚ್ಚಿಕೊಳ್ಳುವುದರಿಂದ ಚರ್ಮರೋಗ ನಿವಾರಣೆಯಾಗುತ್ತದೆ. ಸೂರ್ಯೋದಯಕ್ಕೆ ಮುನ್ನ ಬ್ರಾಹ್ಮಿ ಮುಹೂರ್ತದಲ್ಲಿ ಇದರ ಸೇವನೆ ಹೆಚ್ಚು ಫಲಕಾರಿ. ತುಳಸಿ ಭಾರತೀಯರ ಪಾಲಿಗೆ ಸಂಜೀವಿನಿ. ಯಾವುದೇ ಪೂಜಾ ಸಮಯದಲ್ಲಿ ನೈವೇದ್ಯಕ್ಕೆ ತುಳಸಿದಳಗಳನ್ನು ಸೇರಿಸುವುದು ಇದರ ಪಾವಿತ್ರ್ಯ್ಕೆ ಸಾಕ್ಷಿ. ದಾನ ಕೊಡುವ ಸಂದರ್ಭದಲ್ಲಿಯೂ ತುಳಸಿದಳ ಹಾಕಬೇಕು ಎಂಬುದು ಸಂಪ್ರದಾಯ. ಹೀಗೆ ತುಳಸಿಯ ಮೃತ್ತಿಕೆ, ತೀರ್ಥ, ದಳ, ತೆನೆ ಎಲ್ಲವೂ ನಿತ್ರ ಪವಿತ್ರವೇ. ಇಂಥ ಪವಿತ್ರ ಹಾಗೂ ಔಷಧೀಯ ಗುಣಗಳನ್ನು ಹೊಂದಿರುವ ತುಳಸಿಗೆ ಉತ್ಥಾನ ದ್ವಾದಶಿಯಂದು ಪೂಜೆ ಸಲ್ಲಿಸಿ ಧನ್ಯರಾಗೋಣ.
naadle If you like this article, click on the button below

Offers

Want to Add your Offers, contact Naadle at 7090787344 or Email us at info@naadle.com