Oops! It appears that you have disabled your Javascript. In order for you to see this page as it is meant to appear, we ask that you please re-enable your Javascript!

ಕರಾವಳಿಯಲ್ಲಿ ಹೈ ಅಲರ್ಟ್..!!

karavaliyalli high alert-naadle
Share This:

ಬೆಂಗಳೂರು ನಗರದ ಮೇಲೆ ಪಾಕಿಸ್ತಾನ ದಾಳಿ ನಡೆಸಲು ಸಂಚು ರೂಪಿಸಿದೆ ಎನ್ನುವ ಗುಪ್ತಚರ ವರದಿ ಹಿನ್ನೆಲೆಯಲ್ಲಿ ಮಂಗಳೂರು ನಗರ ಹಾಗೂ ಹೊರ ವಲಯದಲ್ಲಿ ಆಸ್ಪತ್ರೆ, ಐಟಿ ಸಂಸ್ಥೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮಂಗಳೂರಿನ ಲಾಡ್ಜ್ ನಲ್ಲಿ ಅನುಮಾನಾಸ್ಪದ ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 9 ಮಂದಿಯನ್ನು ಮಂಗಳೂರಿನ ಕದ್ರಿ ಪೊಲೀಸರು ತಡರಾತ್ರಿ ವಶಕ್ಕೆ ಪಡೆದಿದ್ದಾರೆ. ಪಂಪ್ ವೆಲ್ ಬಳಿಯ ಲಾಡ್ಜ್‌ನಲ್ಲಿ ಅನುಮಾನಾಸ್ಪದ ವ್ಯಕ್ತಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಬಂಧಿತರು ಮಡಿಕೇರಿ, ಕೇರಳ ಮತ್ತು ಮಂಗಳೂರು ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ನ್ಯಾಶನಲ್ ಕ್ರೈಮ್ ಇನ್ವಿಶ್ಟಿಗೇಶನ್ ಬ್ಯೂರೋ ಎಂಬ ಫಲಕವಿರುವ ಕಾರು ವಶಕ್ಕೆ ಪಡೆಯಲಾಗಿದೆ.karavaliyalli high alert-naadle

Upcoming and Ongoing events

View More Events

Want to Promote your Event, contact Naadle at 7090787344 or Email us at info@naadle.com

ಅದರಂತೆ ಮಂಗಳೂರು ಬಂದರು ಪ್ರದೇಶ, ಬಜ್ಪೆ ವಿಮಾನ ನಿಲ್ದಾಣ, ಇನ್ಫೋಸಿಸ್ ಕ್ಯಾಂಪಸ್, ಕೆ.ಎಸ್. ಹೆಗ್ಡೆ ಮೆಡಿಕಲ್ ಆಸ್ಪತ್ರೆ, ಯನಪೋಯಾ ಆಸ್ಪತ್ರೆ, ಸೋಮೇಶ್ವರ ದೇವಸ್ಥಾನ, ಉಳ್ಳಾಲ ಮಸೀದಿ ಸೇರಿದಂತೆ ಕರಾವಳಿ ಭಾಗದ ಪ್ರಮುಖ ಕಟ್ಟಡಗಳು, ಪ್ರಾರ್ಥಾನಾ ಮಂದಿರಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಪ್ರಮುಖ ಸ್ಥಳಗಳಲ್ಲಿ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ. ನಗರದಲ್ಲಿರುವ ಮುಡಿಪು ಇನ್ಫೋಸಿಸ್, ಮಂಗಳ ಗಂಗೋತ್ರಿ ಸೂರ್ಯ ಇನ್ಫೋಟೆಕ್, ಕ್ಷೇಮ ಆಸ್ಪತ್ರೆ, ನಿಟ್ಟೆ ಆಸ್ಪತ್ರೆ, ಕಟೀಲು ದೇವಸ್ಥಾನ, ಎಂ.ಎಸ್.ಇ.ಝಡ್., ಬಜ್ಪೆ ವಿಮಾನ ನಿಲ್ದಾಣ ಸೇರಿದಂತೆ ಹಲವು ಕಡೆಗಳಲ್ಲಿ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳಗಳು ಆಗಮಿಸಿ ಪರಿಶೀಲನೆ ನಡೆಸಿವೆ ಎಂಬ ಮಾಹಿತಿ ಲಭ್ಯವಾಗಿದೆ. ಕಡಲ ತೀರದಲ್ಲಿ ಯಾವುದೇ ರೀತಿಯ ಅನುಮಾನಾಸ್ಪದ ದೋಣಿ ಅಥವಾ ಇನ್ಯಾವುದೇ ವಸ್ತುಗಳು ಕಂಡುಬಂದಲ್ಲಿ ತಕ್ಷಣವೇ ಪೊಲೀಸ್ ನಿಯಂತ್ರಣ ಕೊಠಡಿ ಸಂಖ್ಯೆ 100ನ್ನು ಸಂಪರ್ಕಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ಮೀನುಗಾರ ಸಮುದಾಯದವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

 

Offers

Want to Add your Offers, contact Naadle at 7090787344 or Email us at info@naadle.com