ಮಹಾ ಶಿವರಾತ್ರಿಯ ವಿಶೇಷತೆ ಮತ್ತು ಆಚರಣೆ..!!

mahaashivarathriya visheshate mattu acharane-naadle
Share This:

ಶಿವರಾತ್ರಿಗೆ ಹಿಂದೂ ಧರ್ಮದಲ್ಲಿ ಅದರದ್ದೇ ಆದ ಮಹತ್ವವಿದೆ. ಶಿವನು ಪಾರ್ವತಿ ದೇವಿಯನ್ನು ವಿವಾಹವಾದ ದಿನವಾಗಿ ಶಿವರಾತ್ರಿಯಂದು ಪರಿಗಣಿಸಲಾಗುತ್ತದೆ. ಕೈಲಾಸ ನಾಥನು ಈ ದಿನದಂದು ಭೂಮಿಗೆ ಆಗಮಿಸಿ ಸಕಲ ಇಷ್ಟಾರ್ಥಗಳನ್ನು ಪೂರೈಸುತ್ತಾನೆಂಬ ನಂಬಿಕೆ ಹಿಂದೂ ಭಕ್ತರಲ್ಲಿದೆ. ಶಿವರಾತ್ರಿಗೆ ಹೆಚ್ಚು ಪಾವಿತ್ರ್ಯತೆ ಪ್ರಾಮುಖ್ಯತೆ ಇರುವುದು ಅಂದು ಆಚರಿಸುವ ಉಪವಾಸದಲ್ಲಿ, ಶುಚಿರ್ಭೂತರಾಗಿ ಶಿವನನ್ನು ಧ್ಯಾನಿಸುತ್ತಾ ದಿನಪೂರ್ತಿ ಭಕ್ತರು ಆಹಾರ ನೀರು ಮುಟ್ಟದೆ ಉಪವಾಸ ಕೈಗೊಳ್ಳುತ್ತಾರೆ. ಮಹಾಶಿವರಾತ್ರಿಯ ಮಧ್ಯರಾತ್ರಿಯಂದು ಮಹಾದೇವನು ಲಿಂಗ ಸ್ವರೂಪವನ್ನು ಧರಿಸುತ್ತಾರೆ. ಫಲ್ಗಣ ಮಾಸದ 14 ನೇ ಗಾಢ ಮಾಸದಂದು ಇದು ಸಂಭವಿಸುತ್ತದೆ. ಶಿವನು ಪ್ರಥಮ ಬಾರಿ ಲಿಂಗ ರೂಪವನ್ನು ಧರಿಸುವುದು ಎಂಬುದಾಗಿ ಇದನ್ನು ಕಾಣಲಾಗುತ್ತದೆ. ಆ ದಿನವನ್ನೇ ಮಹಾಶಿವರಾತ್ರಿಯಾಗಿ ಆಚರಿಸಲಾಗುತ್ತದೆ. ಈ ದಿನಂದು ಶಿವನನ್ನು ಪೂಜಿಸುವುದು ಸಕಲ ಇಷ್ಟಾರ್ಥಗಳನ್ನು ನೆರವೇರಿಸಲಿದೆ ಮತ್ತು ಸುಖ ಸಂತೋಷವನ್ನು ತರಲಿದೆ ಎಂಬುದು ಪ್ರತೀತಿಯಾಗಿದೆ.mahaashivarathriya visheshate mattu acharane-naadle

Upcoming and Ongoing events

View More Events

Want to Promote your Event, contact Naadle at 9035030300 or Email us at info@naadle.com


ಅಲ್ಲದೆ, ಉಪವಾಸವು ಹಗಲಿನಿಂದ ಪ್ರಾರಂಭಗೊಂಡು ರಾತ್ರಿ ಪೂರ್ತಿ ನಡೆದು ಮರುದಿನ ಪ್ರಾತಃ ಕಾಲಕ್ಕೆ ಕೊನೆಗೊಳ್ಳುತ್ತದೆ. ವ್ರತದ ಸಮಯದಲ್ಲಿ ಆಹಾರವಿಲ್ಲದೆ ಕಟ್ಟುನಿಟ್ಟಾಗಿ ದೇವರಲ್ಲಿ ಐಕ್ಯಗೊಳ್ಳಬೇಕು. ವ್ರತಾಧಾರಿಯು ಹಣ್ಣಿನ ರಸ, ಹಣ್ಣುಗಳು ಮತ್ತು ವಿಶೇಷ ವ್ರತ ಆಹಾರಗಳಾದ ವ್ರತದ ಅನ್ನ, ಬೀಜಗಳು, ಈರುಳ್ಳಿ ಬೆಳ್ಳುಳ್ಳಿ ಇಲ್ಲದ ಪದಾರ್ಥಗಳನ್ನು ಸೇವಿಸಬಹುದು. ಸೂರ್ಯಾಸ್ತದ ನಂತರವಷ್ಟೇ ಊಟವನ್ನು ಸೇವಿಸಬೇಕು. ಅಷ್ಟೇ ಅಲ್ಲದೆ ಮುಂಜಾನೆ ಲಿಂಗಕ್ಕೆ ಅಭಿಷೇಕವನ್ನು ಪೂರೈಸಿ ಪ್ರಾರ್ಥನೆಗಳನ್ನು ಸಲ್ಲಿಸಿದ ನಂತರವಷ್ಟೇ ವ್ರತವನ್ನು ಸಂಪನ್ನಗೊಳಿಸಬೇಕು. ವ್ರತ ಸಂಪನ್ನಗೊಳಿಸುವಾಗ ಪ್ರಸಾದ ಇಲ್ಲವೇ, ಶಿವನಿಗೆ ಅರ್ಪಿಸಿದ ಆಹಾರವನ್ನು ಮೊದಲು ತೆಗೆದುಕೊಳ್ಳಬೇಕು.mahaashivarathriya visheshate mattu acharane-naadleಶಿವರಾತ್ರಿ ಹಬ್ಬಕ್ಕೆ ಸಂಬಂಧಿಸಿದಂತೆ ಜನರು ಹೆಚ್ಚಿನ ಕಥೆಗಳನ್ನು ಹೇಳುತ್ತಿರುತ್ತಾರೆ. ಈ ದಿನವೇ ಶಿವನು ತಾಂಡವ ನೃತ್ಯವನ್ನು ಆಡಿದ್ದು ಮತ್ತು ಪಾರ್ವತಿ ದೇವಿಯನ್ನು ವರಿಸಿರುವುದು ಎಂಬುದಾಗಿ ಕೂಡ ಪುರಾಣಗಳಲ್ಲಿ ಉಲ್ಲೇಖಗೊಂಡಿದೆ. ಅದಾಗ್ಯೂ ಶಿವರಾತ್ರಿಯನ್ನು ದೇಶದೆಲ್ಲೆಡೆ ಒಂದೇ ದಿನ ಸಂಭ್ರಮದಂದು ಆಚರಿಸಲಾಗುತ್ತದೆ. ಇಂದು ಶಿವ ದೇವಸ್ಥಾನಗಳಲ್ಲಿ ವಿಶೇಷ ಪೂಜೆ , ಶಿವನಿಗೆ ಪ್ರಿಯವಾದ ಬಿಲ್ವಪತ್ರೆ ಅರ್ಪಣೆ ಇತರ ಸೇವೆಗಳು ನಡೆಯುತ್ತದೆ. ದೇವರಿಗೆ ಜಾಗರಣೆ, ವ್ರತಗಳನ್ನು ಈ ದಿನ ನಡೆಸಲಾಗುತ್ತದೆ.
naadle If you like this article, click on the button below

Offers

Want to Add your Offers, contact Naadle at 9035030300 or Email us at info@naadle.com