ಮಕರ ಸಂಕ್ರಾಂತಿಯ ವಿವಿಧ ರೀತಿಯ ಆಚರಣೆಗಳು..!!

makara sankrathiya vividha acharanegalu-naadle
Share This:

ಸೂರ್ಯನು ಧನು ರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುವುದೇ ಮಕರ ಸಂಕ್ರಾಂತಿ. ಈ ಹಬ್ಬದ ಸಮಯದಲ್ಲಿ ಶುಭಕಾರ್ಯಗಳನ್ನು ಕೈಗೊಳ್ಳುವುದು ತುಂಬಾ ಶ್ರೇಯಸ್ಕರ. ಸೂರ್ಯನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಪ್ರವೇಶಿಸುವ ದಿನವೇ ಸಂಕ್ರಾಂತಿ. ಸೂರ್ಯನು ಒಂದು ರಾಶಿಯಲ್ಲಿ ಒಂದು ತಿಂಗಳು ಇರುತ್ತಾನೆ, ವರ್ಷಕ್ಕೆ ಹನ್ನೆರಡು ತಿಂಗಳುಗಳಾದರೂ, ಮಕರ ಸಂಕ್ರಾಂತಿಗೆ ಇರುವ ಮಹತ್ವ ಉಳಿದ ಸಂಕ್ರಾಂತಿಗಳಿಗೆ ಇಲ್ಲ. ಇಲ್ಲಿ ಸೂರ್ಯನು ರಾಶಿಯನ್ನು ಮಾತ್ರವಲ್ಲ, ಪಥವನ್ನು ಕೂಡ ಬದಲಾಯಿಸುತ್ತಾನೆ ದಕ್ಷಿಣಾದಿಂದ ಉತ್ತರದ ಕಡೆಗೆ ಚಲಿಸುತ್ತಾನೆ. ಇದನ್ನು ಉತ್ತರಾಯಣ ಎಂದು ಆಚರಣೆ ಮಾಡುತ್ತಾರೆ.makara sankrathiya vividha acharanegalu-naadle

Upcoming and Ongoing events

View More Events

Want to Promote your Event, contact Naadle at 9035030300 or Email us at info@naadle.com


ಸಂಕ್ರಾಂತಿಯಂದು ಮುಖ್ಯವಾಗಿ ಕಂಡು ಬರುವುದು ಎಳ್ಳು ಬೆಲ್ಲ. ಸಣ್ಣದಾಗಿ ಕತ್ತರಿಸಿದ ಬೆಲ್ಲ, ಒಣಕೊಬ್ಬರಿ, ಹುರಿಗಡಲೆ, ಸಿಪ್ಪೆ ತೆಗೆದ ಕಡಲೇಕಾಯಿ ಬೀಜ ಹಾಗು ಹುರಿದ ಬಿಳಿ ಎಳ್ಳನ್ನು ಸೇರಿಸಿ ಮನೆಯಲ್ಲಿ ಎಳ್ಳು ಬೆಲ್ಲವನ್ನು ತಯಾರಿಸಿ ಸುತ್ತಮುತ್ತಲಿನ ಮನೆಗಳಿಗೆ ಹಂಚುವುದು ಸಂಕ್ರಾಂತಿಯ ಸಂಪ್ರದಾಯ. “ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತಾನಾಡೋಣ” ಎಂದು ಹೇಳುತ್ತಾರೆ.makara sankrathiya vividha acharanegalu-naadleಮಕರ ಸಂಕ್ರಾಂತಿಯಂದು ಶಬರಿಮಲೆಯಲ್ಲಿ ಕಾಣುವ ಮಕರಜ್ಯೋತಿಗೆ ಹೆಚ್ಚಿನ ಪ್ರಾಧಾನ್ಯತೆ ಇದೆ. ಅಯ್ಯಪ್ಪ ವೃತಾಧಾರಿಗಳಾದ ಜನರು ಶಬರಿಮಲೆಗೆ ತೆರಳಿ ತಮ್ಮ ಸ್ವಾಮಿಯ ಪಾದಕ್ಕೆರಗಿ ಮಕರ ಜ್ಯೋತಿಯ ದರ್ಶನ ಪಡೆದರೆ ಜನ್ಮ ಸಾರ್ಥಕವಾಗುವುದೆಂಬ ನಂಬಿಕೆಯಿಂದಾಗಿ ಲಕ್ಷೋಪಲಕ್ಷ ಜನರು ಈ ಜ್ಯೋತಿಯ ದರ್ಶನಕ್ಕಾಗಿ ವರ್ಷಂಪ್ರತಿ ಶಬರಿಮಲೆ ಸನ್ನಿಧಾನಕ್ಕೆ ಆಗಮಿಸುತ್ತಾರೆ. “ಮಕರ ವಿಳಕ್ಕು” ಎಂದು ಕರೆಯಲ್ಪಡುವ ಈ ಜ್ಯೋತಿಯು ಶಬರಿಮಲೆಯ ಬೆಟ್ಟದಿಂದ ಮೂರು ಬಾರಿ ಗೋಚರವಾಗುತ್ತದೆ. ಶಬರಿಮಲೆಗೆ ತೆರಳಿದ ವೃತಧಾರಿಗಳು ಇದನ್ನು ವೀಕ್ಷಿಸಿದರೆ ಜೀವನ ಪಾವನ ಎಂಬ ನಂಬಿಕೆಯೂ ಇದೆ. ದೇಶದ ವಿವಿಧೆಡೆ ಬೇರೆ ಬೇರೆ ಹೆಸರುಗಳಲ್ಲಿ ಸಂಕ್ರಾಂತಿಯನ್ನು ಆಚರಿಸಲಾಗುತ್ತದೆ.makara sankrathiya vividha acharanegalu-naadleಗುಜರಾತ್ ಮತ್ತು ಮಹಾರಾಷ್ಟ್ರಗಳಲ್ಲಿ ಸಂಕ್ರಾಂತಿಯ ದಿನದಂದು ಗಾಳಿಪಟಗಳನ್ನು ಹಾರಿಬಿಡುವ ಹಾಗೂ ಎಳ್ಳಿನ ಉಂಡೆಗಳನ್ನು ಹಂಚುವ ಸಂಪ್ರದಾಯವೂ ಇಲ್ಲಿದೆ. ಪಂಜಾಬ್ ಮತ್ತು ಹರಿಯಾಣಗಳಲ್ಲಿ ಸಂಕ್ರಾಂತಿಯನ್ನು “ಲೋಹರಿ,” ಎಂದು ಕರೆಯುತ್ತಾರೆ. ತಮಿಳುನಾಡಿನಲ್ಲಿ ಈ ಹಬ್ಬವನ್ನು “ಪೊಂಗಲ್” ಎಂದು ಕರೆಯಲಾಗುತ್ತದೆ. ಇಲ್ಲಿ ಇದು ನಾಲ್ಕು ದಿನಗಳಕಾಲ ನಡೆಯುತ್ತದೆ. ಈ ಸಂದರ್ಭ ಹೊಸಬಟ್ಟೆ ತೊಡುವುದು, ಸಮೃದ್ದಿಯ ಸಂಕೇತವಾಗಿ ಹಾಲು-ಬೆಲ್ಲಗಳನ್ನು ಪಾತ್ರೆಯಲ್ಲಿ ಕುದಿಸಿ ಉಕ್ಕಿಸುವುದು, ಗೋಪೂಜೆ, ಗೂಳಿಯನ್ನು ಪಳಗಿಸುವ ಆಟವೂ ನಡೆಯುತ್ತದೆ. ಹಲವೆಡೆ ವರ್ಷಪೂರ್ತಿ ತಮ್ಮೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ದುಡಿದ ಎತ್ತುಗಳನ್ನು ಕಿಚ್ಚು ಹಾಯಿಸುವ ಸಂಪ್ರದಾಯವೂ ಇದೆ. ಹಬ್ಬದ ಆಚರಣೆ ಕುರಿತಂತೆ ವಿಭಿನ್ನತೆ ಕಂಡು ಬಂದರೂ ಸಂಕ್ರಾಂತಿ ಸಮೃದ್ಧಿಯ ಸಂಕೇತವಾಗಿ ಉಳಿದಿರುವು ಸತ್ಯ.
makara sankrathiya vividha acharanegalu-naadle

naadle If you like this article, click on the button below

Offers

Want to Add your Offers, contact Naadle at 9035030300 or Email us at info@naadle.com