ನಾಗರ ಪಂಚಮಿಯ ವೈಶಿಷ್ಟ್ಯತೆಗಳು..!!

naagara panchamiya vaishistategalu-naadle
Share This:

ನಾಡಿಗೇ ದೊಡ್ಡ ಹಬ್ಬ ಎಂಬ ಖ್ಯಾತಿ ಪಡೆದ ನಾಗರ ಪಂಚಮಿ ಹಬ್ಬವನ್ನು ಕರ್ನಾಟಕದಾದ್ಯಂತ ಆಗಸ್ಟ್ 15 ರಂದು ಭಕ್ತಿ-ಸಂಭ್ರಮದಿಂದ ಆಚರಿಸಲಾಗುತ್ತಿದೆ. ಪ್ರತಿವರ್ಷ ಶ್ರಾವಣ ಮಾಸದ ಶುಕ್ಲ ಪಕ್ಷದ ಐದನೇ ದಿನ(ಪಂಚಮಿ) ಆಚರಿಸಲ್ಪಡುವ ಈ ಹಬ್ಬಕ್ಕೆ ತನ್ನದೇ ಆದ ವೈಶಿಷ್ಟ್ಯವಿದೆ. ಶ್ರಾವಣ ಮಾಸದ ಮೊದಲ ಹಬ್ಬವಾದ ನಾಗರಪಂಚಮಿ ಹಬ್ಬಗಳ ಸಾಲು ಆರಂಭವಾಗುವುದಕ್ಕೆ ನಾಂದಿ ಹಾಡುತ್ತದೆ. ನಾಗರ ಪಂಚಮಿಯ ನಂತರ ರಕ್ಷಾಬಂಧನ, ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ದಸರಾ, ದೀಪಾವಳಿ ಹೀಗೆ ಹಬ್ಬಗಳು ಒಂದರ ಹಿಂದೊಂದರಂತೆ ಆರಂಭವಾಗುತ್ತವೆ.naagara panchamiya vaishistategalu-naadle

Upcoming and Ongoing events

View More Events

Want to Promote your Event, contact Naadle at 7090787344 or Email us at info@naadle.com


ಪುರಾಣ ಕತೆಯೊಂದರ ಪ್ರಕಾರ ಹಾವು ಕಚ್ಚಿ ಮಡಿದ ತನ್ನ ಸಹೋದರನನ್ನು ಸಹೋದರಿಯೊಬ್ಬಳು ಬದುಕಿಸಿಕೊಂಡ ದಿನ ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯಾಗಿತ್ತು. ಹಾವನ್ನು ಭಕ್ತಿಭಾವದಿಂದ ಪೂಜಿಸಿ ತನ್ನ ಅಣ್ಣನನ್ನು ತಂಗಿ ಬದುಕಿಸಿಕೊಂಡ ದಿನವಾಗಿದ್ದರಿಂದ ಈ ದಿನವನ್ನು ಭ್ರಾತೃತ್ವದ ಸಂಕೇತವಾಗಿಯೂ ಕೆಲವೆಡೆ ಆಚರಿಸಲಾಗುತ್ತದೆ. ಜನಮೇಜಯ ಎಂಬ ರಾಜ ತನ್ನ ತಂದೆ ಪರೀಕ್ಷಿತನ ಸಾವಿಗೆ ಹಾವು ಕಾರಣ ಎಂದು ತಿಳಿದು ಭೂಲೋಕದಲ್ಲಿರುವ ಸರ್ಪಸಂಕುಲವನ್ನೆಲ್ಲ ನಾಶ ಮಾಡುವ ಶಪಥ ಮಾಡಿ, ಸರ್ಪಯಜ್ಞ ಮಾಡಲು ಹೊರಡುತ್ತಾನೆ. ಆದರೆ ಪ್ರಾಣಿ ಹಿಂಸೆ ಮಹಾಪಾಪ ಎಂಬುದನ್ನು ಸಂತರೊಬ್ಬರ ಹಿತವಚನದಿಂದ ಅರಿತ ಜನಮೇಜಯ ಸರ್ಪಯಜ್ಞವನ್ನು ಹಿಂದೆಗೆದುಕೊಳ್ಳುತ್ತಾನೆ. ಹೀಗೆ ಜನಮೇಜಯ ಸರ್ಪಯಜ್ಞವನ್ನು ನಿಲ್ಲಿಸಲು ನಿರ್ಧರಿಸಿದ ದಿನ ಶ್ರಾವಣ ಶುಕ್ಲ ಪಂಚಮಿಯಾಗಿತ್ತು. ಆದ್ದರಿಂದ ಈ ದಿನವನ್ನು ನಾಗರ ಪಂಚಮಿ ಎಂದು ಆಚರಿಸಲಾಗುತ್ತದೆ ಎಂಬ ಪ್ರತೀತಿಯೂ ಇದೆ. ಶ್ರೀಕೃಷ್ಣನ ನೆನಪು ನಾಗರ ಪಂಚಮಿಗೂ ಭಗವಾನ್ ಶ್ರೀಕೃಷ್ಣನಿಗೂ ಸಂಬಂಧವಿದೆ. ಪುರಾಣ ಕತೆಯೊಂದರ ಪ್ರಕಾರ ಬಾಲ ಕೃಷ್ಣ ಯಮುನಾ ನದಿ ತೀರದಲ್ಲಿ ಆಟವಾಡುತ್ತಿದ್ದಾಗ ನದಿಯಲ್ಲಿ ಜಾರಿ ಬೀಳುತ್ತಾನೆ. ಕೃಷ್ಣ ನದಿಗೆ ಬಿದ್ದ ಸಂದರ್ಭದಲ್ಲಿ ಕಾಳಿಯಾ ಎಂಬ ಹಾವೊಂದು ಅತನ ಮೇಲೆ ದಾಳಿ ನಡೆಸುತ್ತದೆ. ಆದರೆ ದೈವತ್ವದ ಸ್ವರೂಪವಾಗಿದ್ದ ಶ್ರೀಕೃಷ್ಣ ಕಾಳಿಯಾನನ್ನು ಮಣಿಸುತ್ತಾನೆ. ಈತ ಸಾಮಾನ್ಯ ಮಗುವಲ್ಲ ಎಂಬುದನ್ನು ಅರಿತ ಕಾಳಿಯ ಹಾವು ತನ್ನನ್ನು ಬಿಟ್ಟುಬಿಡುವಂತೆ ಕೃಷ್ಣನಲ್ಲಿ ಬೇಡುತ್ತದೆ. ಆಗ ಜನರಿಗೆ ಯಾವುದೇ ರೀತಿಯ ತೊಂದರೆ ನೀಡಬಾರದೆಂದು ವಚನ ಪಡೆದು, ಶ್ರೀಕೃಷ್ಣ ಆ ಹಾವನ್ನು ಬಿಟ್ಟು ಬಿಡುತ್ತಾನೆ. ಹೀಗೆ ಕೃಷ್ಣನು ಕಾಳಿಯಾ ಹಾವನ್ನು ಸೋಲಿಸಿದ ದಿನ ಶ್ರಾವಣ ಶುಕ್ಲ ಪಂಚಮಿಯಾಗಿತ್ತು. ಭಯಂಕರ ಹಾವನ್ನು ಕೃಷ್ಣ ಮಣಿಸಿದ ನೆನಪಿಗಾಗಿ ಈ ಹಬ್ಬ ಆಚರಿಸಲಾಗುತ್ತದೆ ಎಂಬ ನಂಬಿಕೆಯೂ ಇದೆ.naagara panchamiya vaishistategalu-naadleಮಳೆಗಾಲದಲ್ಲಿ ಹಾವಿನ ಭಯ ನಾಗರ ಪಂಚಮಿಯನ್ನು ಮಳೆಗಾಲದ ಸಮಯದಲ್ಲೇ ಆಚರಿಸುವುದಕ್ಕೆ ಕಾರಣ ಹುಡುಕಿದರೆ, ಮಳೆಗಾಲದಲ್ಲಿ ಹೆಚ್ಚಾಗಿ ಕಂಡುಬರುವ ಹಾವುಗಳಿಂದ ರಕ್ಷಣೆ ಪಡೆಯುವ ಉದ್ದೇಶ ಎದ್ದು ಕಾಣುತ್ತದೆ. ಈ ಸಮಯದಲ್ಲಿ ಹಾವಿಗೆ ಹಾಲೆರೆಯುವ ಮೂಲಕ ಯಾವುದೇ ರೀತಿಯ ಅಪಾಯ ನೀಡದಿರು ಎಂದು ಬೇಡುವ ಉದ್ದೇಶವೂ ಇರುವುದು ಸುಳ್ಳಲ್ಲ. ನಾಗರ ಪಂಚಮಿ ಉಪವಾಸ ಪುರಾಣ ಕತೆಯೊಂದರಲ್ಲಿ ಸತ್ಯೇಶ್ವರಿ ಎಂಬ ದೇವಿಯೊಬ್ಬಳು ನಾಗರಪಂಚಮಿಯ ಮುನ್ನಾದಿನ ಮೃತನಾದ ತನ್ನ ಸಹೋದರನನ್ನು ನೆನೆದು, ನಾಗರಪಂಚಮಿಯ ದಿನ ಅನ್ನ-ನೀರು ಬಿಟ್ಟು ಉಪವಾಸ ಮಾಡಿದಳು. ಇಂದಿಗೂ ನಾಗರ ಪಂಚಮಿಯ ದಿನ ಸಹೋದರನ ಒಳಿತಿಗಾಗಿ ಸಹೋದರಿಯರು ಉಪವಾಸ ಮಾಡುವ ಪರಿಪಾಠವಿದೆ.naagara panchamiya vaishistategalu-naadleನಾಗರ ಪಂಚಮಿಯ ದಿನ ನಾಗರ ಕಲ್ಲು ಅಥವಾ ನಾಗರ ಹಾವನ್ನು ಆರಾಧಿಸುವುದರಿಂದ ಬಡತನವು ದೂರವಾಗುವುದು ಎಂದು ಹೇಳಲಾಗುವುದು. ಅವಿವಾಹಿತ ಮಹಿಳೆಯರು ನಾಗರ ಕಲ್ಲಿಗೆ ಹಾಲೆರೆಯುವುದು ಅಥವಾ ಪೂಜೆ ಗೈಯುವುದರಿಂದ ಮನದಿಂಗಿತದಂತಹ ಹುಡುಗನನ್ನು ಪಡೆದುಕೊಳ್ಳುವರು. ದೇವರ ಆಶೀರ್ವಾದಕ್ಕೆ ಪಾತ್ರರಾಗುತ್ತಾರೆ. ಈ ಹಬ್ಬದ ದಿನ ಭಕ್ತರು ನಾಗರ ಪೂಜೆ ಹಾಗೂ ನಾಗದೇವರ ದೇವಸ್ಥಾನಕ್ಕೆ ಭೇಟಿ ನೀಡುವುದರಿಂದ ನಮ್ಮ ಮನಸ್ಸಿನ ಇಚ್ಛೆಗಳು ಪೂರೈಸುತ್ತವೆ ಎಂದು ಹೇಳಲಾಗುವುದು. ಈ ಹಬ್ಬವನ್ನು ಭಾರತದಾದ್ಯಂತ ಆಚರಿಸಲಾಗುವುದು.
naadle If you like this article, click on the button below

Offers

Want to Add your Offers, contact Naadle at 7090787344 or Email us at info@naadle.com