ಪಿಲಿಕುಳ ನಿಸರ್ಗಧಾಮದ ಲೇಕ್‌ ಗಾರ್ಡನ್‌ನಲ್ಲಿ ಪಿಲಿಕುಳ ಮತ್ಸ್ಯೋತ್ಸವ ಜು. 21ರಂದು ನಡೆಯಲಿದೆ..!!

pilikula nisargadhaamada lake gardannalli pilikula matsyotsava july 21 randu nadeyalide-naadle
Share This:

ರಾಜ್ಯ ಸರಕಾರದ ಮೀನುಗಾರಿಕಾ ಇಲಾಖೆ, ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮ ಮತ್ತು ಪಿಲಿಕುಳ ನಿಸರ್ಗಧಾಮದ ಆಶ್ರಯದಲ್ಲಿ ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಲೇಕ್‌ ಗಾರ್ಡನ್‌ನಲ್ಲಿ ಪಿಲಿಕುಳ ಮತ್ಸ್ಯೋತ್ಸವ ಮತ್ತು ಕ್ಷೇತ್ರೋತ್ಸವ ಜು. 21ರಂದು ನಡೆಯಲಿದೆ ಎಂದು ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ. ಈ ಸಂದರ್ಭದಲ್ಲಿ ಕೆರೆಯಲ್ಲಿ ಮೀನು ಮರಿಗಳನ್ನು ಬಿಡುವ ಕಾರ್ಯಕ್ರಮ ನಡೆಯಲಿದೆ. ಹಬ್ಬದ ಅಂಗವಾಗಿ ಪಿಲಿಕುಳದ ಲೇಕ್‌ ಗಾರ್ಡನ್‌ನ ಕೆರೆಯಲ್ಲಿ ಬೆಳೆಸಿದ ಕಾಟ್ಲಾ, ರೋಹು, ಸಾಮಾನ್ಯ ಗೆಂಡೆ ಹಾಗೂ ಇತರೆ ಮೀನುಗಳನ್ನು ಹಿಡಿದು, ಮುಗಿಯುವ ತನಕ ಸಾರ್ವಜನಿಕ ಹರಾಜು ಮಾಡಲಾಗುವುದು ಎಂದು ತಿಳಿಸಿದ್ದಾರೆ.pilikula nisargadhaamada lake gardannalli pilikula matsyotsava july 21 randu nadeyalide-naadle

Upcoming and Ongoing events

View More Events

Want to Promote your Event, contact Naadle at 7090787344 or Email us at info@naadle.com


ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದಿಂದ ಸಿಹಿ ನೀರಿನ ಮೀನುಗಳು, ಪಾಂಪ್ಲೆಟ್‌, ಅಂಜಲ್‌, ಬಂಗುಡೆ, ಸಿಗಡಿ, ಬೊಂಡಾಸು ಹಾಗೂ ಇನ್ನಿತರ ತಾಜಾ ಮೀನು ಮತ್ತು ಮೌಲ್ಯವರ್ಧಿತ ಮೀನು ಉತ್ಪನ್ನಗಳ ಮಾರಾಟದ ವ್ಯವಸ್ಥೆ ಮಾಡಲಾಗಿದೆ. ಅದೇ ರೀತಿ ತಾಜಾ ಸಮುದ್ರ ಮೀನುಗಳ ಫ್ರೈ, ಫಿಶ್‌ ಮಸಾಲಾ, ಫಿಶ್‌ ಕಬಾಬ್‌ ಹಾಗೂ ಇನ್ನಿತರ ಮೀನಿನ ಖಾದ್ಯಗಳನ್ನು ಶುಚಿ ರುಚಿಯಾಗಿ ಸ್ಥಳದಲ್ಲೇ ತಯಾರಿಸಿ ಮಾರಾಟ ಮಾಡಲಾಗುವುದು. ನಾನಾ ರೀತಿಯ ಮೀನು ಮರಿಗಳ ಮತ್ತು ಒಣ ಮೀನುಗಳ ಪ್ರದರ್ಶನ ಮತ್ತು ಮಾರಾಟ ಮತ್ತು ಅಲಂಕಾರಿಕಾ ಮೀನುಗಳ ಪ್ರದರ್ಶನ ಮತ್ತು ಮಾರಾಟ ಕೂಡಾ ಇದೆ.

Offers

Want to Add your Offers, contact Naadle at 7090787344 or Email us at info@naadle.com