ಎಲ್ಲೆಲೋ ಗಣೇಶ ಹಬ್ಬದ ಸಂಭ್ರಮ..!!

yellelo ganesha habbada sambrama-naadle
Share This:

ಗಣೇಶ ಚತುರ್ಥಿಯು ಭಾರತದಲ್ಲಿ ಅತ್ಯಂತ ಶ್ರದ್ಧಾ ಭಕ್ತಿಗಳಿಂದ ಆಚರಿಸಲ್ಪಡುವ ಹಬ್ಬಗಳಲ್ಲಿ ಒಂದಾಗಿದೆ. ಇದು ವಿದ್ಯೆಯ ಮತ್ತು ಜ್ಞಾನದ ಅಧಿಪತಿ, ಸಂಪತ್ತು ಮತ್ತು ಅದೃಷ್ಟದ ಅಧಿನಾಯಕನಾದ ನಮ್ಮ ಮೂಷಿಕ ವಾಹನನ ಜನನವನ್ನು ಸಾರುವ ಹಬ್ಬ. ಈ ಹಬ್ಬವನ್ನು ವಿನಾಯಕ ಚತುರ್ಥಿ ಅಥವಾ ಗಣೇಶ ಚತುರ್ಥಿ ಇಲ್ಲವೇ ಚೌತಿ ಎಂದು ಸಹ ಕರೆಯುತ್ತಾರೆ. ಇದನ್ನು ಹಿಂದೂಗಳೆಲ್ಲರು ಶ್ರದ್ಧಾ ಭಕ್ತಿಗಳಿಂದ ಆಚರಿಸುತ್ತಾರೆ.yellelo ganesha habbada sambrama-naadleಇತಿಹಾಸ

Upcoming and Ongoing events

View More Events

Want to Promote your Event, contact Naadle at 7090787344 or Email us at info@naadle.com


ಗಣೇಶ ಚತುರ್ಥಿಯ ಆರಂಭವು ಮರಾಠರು ತಮ್ಮ ಆಳ್ವಿಕೆಯ ಉತ್ತುಂಗದಲ್ಲಿದ್ದಾಗ ಪ್ರಚಾರಕ್ಕೆ ತಂದರು. ಅದರಲ್ಲಿಯೂ ಮರಾಠರ ಶ್ರೇಷ್ಠ ರಾಜ ಛತ್ರಪತಿ ಶಿವಾಜಿಯು ಇದನ್ನು ಆಚರಿಸಲು ಆರಂಭಿಸಿದನೆಂದು ಇತಿಹಾಸ ಸಾರುತ್ತದೆ. ಗಣೇಶನ ಹಬ್ಬ ಆರಂಭಗೊಳ್ಳಲು ಹಲವಾರು ದಂತ ಕತೆಗಳ ಹಿನ್ನಲೆಯಿದೆ. ಶಿವ-ಪಾರ್ವತಿಯರ ಮಗನಾದ ಗಣೇಶನ ಹುಟ್ಟಿನ ಕುರಿತು ಹಲವಾರು ಕತೆಗಳು ಚಾಲ್ತಿಯಲ್ಲಿವೆ. ಅದರಲ್ಲಿ ಅತ್ಯಂತ ಪ್ರಸಿದ್ಧವಾದ ಕತೆ ಹೀಗಿದೆ. ಗಣಪತಿಗೆ ಜನ್ಮ ನೀಡಿದವಳು ಪಾರ್ವತಿ. ಈಶ್ವರನು ಇಲ್ಲದ ಸಮಯದಲ್ಲಿ ಶ್ರೀಗಂಧದ ಮುದ್ದೆಯಿಂದ ಆಕೆ ಗಣೇಶನನ್ನು ಸೃಷ್ಟಿಸಿ, ತಾನು ಸ್ನಾನಕ್ಕೆ ಹೋಗುತ್ತ ಬಾಗಿಲನ್ನು ಕಾಯುವಂತೆ ತಿಳಿಸಿ ಹೋದಳಂತೆ. ಆಕೆ ಸ್ನಾನಕ್ಕೆ ಹೋದಾಗ ಅಲ್ಲಿಗೆ ಬಂದ ಶಿವನಿಗೆ ಒಳಗೆ ಹೋಗಲು ಗಣಪತಿ ನಿರಾಕರಿಸಿದಾಗ, ಅವರಿಬ್ಬರಿಗೂ ಜಗಳವಾಯಿತಂತೆ. ಈ ಜಗಳದಲ್ಲಿ ಕೋಪಗೊಂಡ ಈಶ್ವರನು ರೌದ್ರಾವತಾರವನ್ನು ತಾಳಿ ಗಣಪತಿಯ ತಲೆಯನ್ನು ಕತ್ತರಿಸಿ ಹಾಕಿದನಂತೆ.
ಆಮೇಲೆ ಅಲ್ಲಿಗೆ ಆಗಮಿಸಿದ ಪಾರ್ವತಿ ದೇವಿಯು ಈ ದೃಶ್ಯವನ್ನು ಕಂಡು ಉಗ್ರಾವತಾರವನ್ನು ತಾಳಿದಳಂತೆ, ಆಗ ಆಕೆ ಕಾಳಿಯ ಅವತಾರವನ್ನು ತಾಳಿ ವಿಶ್ವವನ್ನು ನಾಶಪಡಿಸುವ ಬೆದರಿಕೆಯನ್ನು ಹಾಕಿದಳಂತೆ. ಇದು ಪ್ರತಿಯೊಬ್ಬರನ್ನು ಆತಂಕಕ್ಕೆ ತಳ್ಳಿತಂತೆ. ಆಗ ಎಲ್ಲರೂ ಕಾಳಿಕಾದೇವಿಯ ಕೋಪವನ್ನು ತಣಿಸುವ ಉಪಾಯವನ್ನು ಹುಡುಕುವಂತೆ ಈಶ್ವರನಿಗೆ ಮೊರೆ ಸಲ್ಲಿಸಿದರಂತೆ. ಆಗ ಶಿವನು ತನ್ನ ಅನುಯಾಯಿಗಳಿಗೆ ಹೀಗೆ ಹೇಳಿದನಂತೆ. ಎಲ್ಲಾ ಕಡೆ ಹುಡುಕಿ, ನಿಮ್ಮ ಕಣ್ಣಿಗೆ ಮೊದಲು ಕಾಣಿಸುವ, ಯಾವ ತಾಯಿ ಉದಾಸೀನವಾಗಿ ತನ್ನ ಮಗುವನ್ನು ಬೆನ್ನ ಹಿಂದೆ ಬಿಟ್ಟು ಬಿಟ್ಟು ಇರುತ್ತಾಳೆಯೋ, ಆ ಮಗುವಿನ ತಲೆಯನ್ನು ಕಡಿದು ತನ್ನಿ ಎಂದನಂತೆ. ಹೀಗೆ ಶಿವನ ಅನುಯಾಯಿಗಳು ಹುಡುಕುವಾಗ ಅವರಿಗೆ ಮೊದಲು ಕಾಣಿಸಿದ್ದು ತಾಯಿಯ ಬೆನ್ನ ಹಿಂದೆ ತನ್ನ ಪಾಡಿಗೆ ತಾನಿದ್ದ ಆನೆ ಮರಿ. ಅವರು ಅದನ್ನೇ ಕಡಿದು ತಂದು ಶಿವನಿಗೆ ನೀಡಿದರು. ಇದನ್ನು ನೋಡಿ ಕಾಳಿಕಾ ದೇವಿಯ ಕೋಪವು ತಣ್ಣಗಾಯಿತು. ಪಾರ್ವತಿ ದೇವಿಯು ಸಂತೋಷಕ್ಕೆ ಪಾರವೇ ಇಲ್ಲದಂತಾಯಿತು. ಆಗ ಎಲ್ಲಾ ದೇವರುಗಳು ಗಣೇಶನನ್ನು ಆಶಿರ್ವದಿಸಿದರು. ಆ ದಿನವನ್ನು ಗಣೇಶ ಚತುರ್ಥಿ ಎಂದು ಆಚರಿಸಲು ಆರಂಭಿಸಿದರು.yellelo ganesha habbada sambrama-naadleಆಚರಣೆ 

ಗಣೇಶ ಹಬ್ಬದಂದು ಕೆಲವು ಸಂಘಟನೆಗಳು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಪೂಜಾಕಾರ್ಯಗಳನ್ನು ನೆರವೇರಿಸಿ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿಜೃಂಭಣೆಯಿಂದ ಆಚರಿಸುತ್ತಾರೆ. ಪ್ರತಿಷ್ಠಾಪನೆಯ ನಂತರ ಕೆಲವು ದಿನಗಳು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ನಂತರ ವಿಜೃಂಭಣೆಯಿಂದ ಗಣೇಶನ ಮೂರ್ತಿಯನ್ನು ವಿವಿಧ ಟ್ಯಾಬ್ಲೊ, ನೃತ್ಯ ತಂಡಗಳ ಮೂಲಕ ವಿಸರ್ಜನಾ ಮಹೋತ್ಸವನ್ನು ನೆರವೇರಿಸುತ್ತಾರೆ.
naadle If you like this article, click on the button below

Offers

Want to Add your Offers, contact Naadle at 7090787344 or Email us at info@naadle.com